ಭಾರತ -ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಪಿಂಕ್ ಬಾಲ್ – ಸೌರವ್ ಗಂಗೂಲಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಹೊನಲು ಬೆಳಕಿನಡಿಯಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.
ಆಡಿಲೇಡ್ ನಲ್ಲಿ ನಡೆಯಲಿರುವ ಈ ಟೆಸ್ಟ್ ಪಂದ್ಯದ ದಿನಾಂಕ ಇನ್ನು ನಿಗದಿಯಾಗಿಲ್ಲ. ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರ ಟೆಸ್ಟ್ ಸರಣಿ ನಡೆಯಲಿದೆ.
ಮೊದಲ ಟೆಸ್ಟ್ ಪಂದ್ಯ ಪಿಂಕ್ ಬಾಲ್ ನಲ್ಲಿ ನಡೆಯಲಿದೆ. ಹಾಗೇ ಆಸ್ಟ್ರೇಲಿಯಾ ವಿರುದ್ದ ಭಾರತ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ,
ಮೂರು ಏಕದಿನ ಹಾಗೂ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಐಪಿಎಲ್ ಮುಗಿದ ತಕ್ಷಣ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.
14 ದಿನಗಳ ಕ್ವಾರಂಟೈನ್ ನಲ್ಲಿ ಅಭ್ಯಾಸ ನಡೆಸಿದ್ದ ನಂತರ ಈ ಟಿ-ಟ್ವೆಂಟಿ, ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಲಿವೆ.
ಕೋವಿಡ್ ಮಾರ್ಗಸೂಚಿ ಮತ್ತು ಜೈವಿಕ್ ಸುರಕ್ಷತೆಯ ನಡುವೆ ಈ ಸರಣಿ ನಡೆಯಲಿದೆ. ಈ ಬಗ್ಗೆ ಭಾನುವಾರ ನಡೆದ ಬಿಸಿಸಿಐ ಅಪೆಕ್ಸ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಇದೇ ವೇಳೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತದಿಂದ ಯಾರು ಕೂಡ ಸ್ಪಧಿಸುತ್ತಿಲ್ಲ. ಇಲ್ಲಿಯವರೆಗೆ ಯಾರು ಕೂಡ ಭಾರತದಿಂದ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿಲ್ಲ.
ಅಕ್ಟೋಬರ್ 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಶಶಾಂಕ್ ಮನೋಹರ್ ಅವರ ಅಧಿಕಾರಾವಧಿ ಮುಗಿದ ನಂತರ ಕಳೆದ ಮೂರು ತಿಂಗಳಿಂದ ಐಸಿಸಿ ಹುದ್ದೆ ಖಾಲಿ ಇದೆ.
ಡಿಸೆಂಬರ್ ಮೊದಲ ವಾರ ಐಸಿಸಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಅಲ್ಲಿಯವರೆಗೆ ಡೆಪ್ಯೂಟಿ ಚೇರ್ ಮೆನ್ ಇಮ್ರಾನ್ ಖ್ವಾಜಾ ಅವರು ಜವಾಬ್ದಾರಿಯನ್ನು ನಿಭಾಯಿಸಿಲಿದ್ದಾರೆ.








