ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಡೆಲ್ಲಿ ಹುಡುಗರ ಅಬ್ಬರಕ್ಕೆ ತಲ್ಲಣಗೊಂಡ ರಾಯಲ್ ಚಾಲೆಂಜರ್ಸ್

admin by admin
October 8, 2020
in IPL 2020, Newsbeat, ಐಪಿಎಲ್ 2020, ಕ್ರೀಡೆ
Marcus Stoinis celebrates his fifty ipl 2020 saakshatv
Share on FacebookShare on TwitterShare on WhatsappShare on Telegram

ಐಪಿಎಲ್ 2020- ಡೆಲ್ಲಿ ಹುಡುಗರ ಅಬ್ಬರಕ್ಕೆ ತಲ್ಲಣಗೊಂಡ ರಾಯಲ್ ಚಾಲೆಂಜರ್ಸ್

Kagiso Rabada ipl 2020 saakshatvಮಾರ್ಕಸ್ ಸ್ಟೋನಿಸ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮತ್ತು ಕಾಗಿಸೊ ರಬಾಡ ಅವರ ಅದ್ಭುತ ಬೌಲಿಂಗ್ ದಾಳಿಗೆ ಕಂಗೆಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ 19ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್ ಗಳಿಂದ ಸೋಲು ಅನುಭವಿಸಿತ್ತು.
ದುಬೈನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರ ಲಾಭ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6.4 ಓವರ್ ಗಳಲ್ಲಿ ಮೊದಲ ವಿಕೆಟ್‍ಗೆ 68 ರನ್ ಗಳಿಸಿತು. ಪೃಥ್ವಿ ಶಾ 23 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 42 ರನ್ ಸಿಡಿಸಿದ್ರೆ, ಶಿಖರ್ ಧವನ್ ಅವರು 28 ಎಸೆತಗಳಲ್ಲಿ 32 ರನ್ ಗಳಿಸಿದ್ರು. ಹಾಗೇ ನಾಯಕ ಶ್ರೇಯಸ್ ಅಯ್ಯರ್ ಅವರು 11 ರನ್ ಗಳಿಸಿದ್ದಾಗ ದೇವದತ್ ಪಡಿಕ್ಕಲ್ ಅವರ ಅದ್ಭುತ ಕ್ಯಾಚ್‍ಗೆ ಬಲಿಯಾದ್ರು.
ಬಳಿಕ ರಿಷಬ್ ಪಂತ್ ಜೊತೆ ಸೇರಿಕೊಂಡ ಮಾರ್ಕಸ್ ಸ್ಟೋನಿಸ್ ಅವರು ನಾಲ್ಕನೇ ವಿಕೆಟ್‍ಗೆ 97 ರನ್ ಪೇರಿಸಿದ್ರು. ಈ ಹಂತದಲ್ಲಿ 37 ರನ್ ಗಳಿಸಿದ್ದ ರಿಷಬ್ ಪಂತ್ ಪೆವಿಲಿಯನ್ ಹಾದಿ ಹಿಡಿದ್ರು. ಇನ್ನೊಂದೆಡೆ ಮಾರ್ಕಸ್ ಸ್ಟೋನಿಸ್ ಅವರು ಕೇವಲ 26 ಎಸೆತಗಳಲ್ಲಿ 6 ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ ಅಜೇಯ 53 ರನ್ ಗಳಿಸಿದ್ರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್ ದಾಖಲಿಸಿತು.
ಸವಾಲನ್ನು ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡೆಲ್ಲಿ ಬೌಲರ್ ಗಳು ಕಂಟಕವಾಗಿ ಪರಿಣಮಿಸಿದ್ರು. ಆರಂಭಿಕ ದೇವದತ್ ಪಡಿಕ್ಕಲ್ ಅವರು 4ರನ್‍ಗೆ ಸೀಮಿತವಾದ್ರೆ, ಆರೋನ್ ಫಿಂಚ್ ಹೋರಾಟ 13 ರನ್ ಗೆ ಅಂತ್ಯಗೊಂಡಿತು.
 Delhi Capitals players ipl 2020 saakshatvಅದೇ ರೀತಿ ಎಬಿಡಿ ವಿಲಿಯರ್ಸ್ 9 ರನ್, ಮೋಯಿನ್ ಆಲಿ 11 ಹಾಗೂ ವಾಷಿಂಗ್ಟನ್ ಸುಂದರ್ 17 ರನ್ ಮತ್ತು ಶಿವಂ ದುಬೆ 11 ರನ್, ಉದನಾ 1 ರನ್, ಮಹಮ್ಮದ್ ಸಿರಾಜ್ 5 ರನ್ ಹಾಗೂ ನವದೀಪ್ ಸೈನಿ ಅಜೇಯ 12 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದ್ರು.
ಇನ್ನೊಂದೆಡೆ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿದ್ರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಡಿಸಿ ತಂಡದ ನಿಖರ ದಾಳಿಗೆ ಕೊಹ್ಲಿ ಕೂಡ ಅಬ್ಬರ ಬ್ಯಾಟಿಂಗ್ ನಡೆಸಲು ವಿಫಲರಾದ್ರು. ಅಂತಿಮವಾಗಿ ಆರ್‍ಸಿಬಿ ತಂಡ 9 ವಿಕೆಟ್‍ಗೆ 139 ರನ್ ಗಳಿಸಿ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಕಾಗಿಸೊ ರಬಾಡ ನಾಲ್ಕು ವಿಕೆಟ್ ಪಡೆದ್ರೆ, ಅಕ್ಷರ್ ಪಟೇಲ್ ಮತ್ತು ಆನ್ರಿಚ್ ಅವರು ತಲಾ ಎರಡು ವಿಕೆಟ್ ಪಡೆದ್ರು. ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026
Tags: #Devdutt Padikkal#Kagiso Rabada#Marcus Stoinis#Prithvi Shaw#rishab pant#shikhar dhavanAB de VilliersAxar Pateldelhi capitalsDubaiIPL 2020Royal Challengers BangaloreShreyas Iyer.virat kohli
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram