ನವದೆಹಲಿ: ಹಣಕಾಸು ಬಿಕ್ಕಟ್ಟಿಗೆ ಸಿಲುಕಿರುವ ಯೆಸ್ ಬ್ಯಾಂಕ್ ಅನ್ನು ಆರ್ ಬಿಐ ಸೂಪರ್ ಸೀಡ್ ಮಾಡಿದೆ. ಈ ಹಿನ್ನೆಲೆ ಸಂಸದ ರಾಹುಲ್ ಗಾಂಧಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನೋ ಯೆಸ್ ಬ್ಯಾಂಕ್. ಮೋದಿ ಹಾಗೂ ಅವರ ಐಡಿಯಾಗಳು ಭಾರತದ ಆರ್ಥಿಕತೆಯನ್ನ ಹಾಳು ಮಾಡಿವೆ ಎಂದು ಆರೋಪಿಸಿದ್ದಾರೆ.

ಇನ್ನು ರಾಹುಲ್ ಗಾಂಧಿ ಟ್ವೀಟ್ ಗೆ ತಿರುಗೇಟು ಕೊಟ್ಟಿರೋ ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ, ಇಲ್ಲ ರಾಹುಲ್, ಭಾರತದ ಬ್ಯಾಂಕ್ ಗಳು ಹಾಗೂ ದೇಶದ ಆರ್ಥಿಕ ಸ್ಥಿತಿ ಹೀಗಾಗಿರುವುದಕ್ಕೆ ನಿಮ್ಮ ಹಣಕಾಸು ಸಚಿವ ಪಿ. ಚಿದಂಬರಂ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.








