ಬೆಂಗಳೂರು : ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿದ್ದು, ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ.
ಐಪಿಎಲ್ 2020- ರಾಜಸ್ತಾನ ರಾಯಲ್ಸ್ ಮತ್ತು ಕಿಂಗ್ಸ್ ಪಂಜಾಬ್ ಜಟಾಪಟಿ
ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ. ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.
ಕೆಲವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಕಮಲ್ ಪಂಥ್ ಹೇಳಿದ್ದಾರೆ.
ಅಲ್ಲದೆ ನಾಳಿನ ಬಂದೋಬಸ್ತ್ ಗೆ 47 ಕೆಎಸ್ಆರ್ಪಿ, 26 ಸಿಎಆರ್ ತುಕಡಿ ಸೇರಿದಂತೆ ನಗರದ ಎಲ್ಲಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ.
ನಗರದ ಬೇರೆ ಬೇರೆ ಕಡೆಗಳಿಂದ ಹೊರಡುವ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಇಲ್ಲ. ಟ್ರಾಫಿಕ್ ಜಾಮ್ ಆಗುವ ಹಿನ್ನೆಲೆ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದು ತಿಳಿಸಿದರು.








