ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಳಿಯಿಂದಾಗಿ ಆತಂಕದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಸಾಂತ್ವನ ಆತ್ಮಸ್ಥೈರ್ಯ ತುಂಬಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ರಾತ್ರಿ ಭೇಟಿ ನೀಡಿ, ಸಮಾಲೋಚನೆ ನಡೆಸಿ ಆಶೀರ್ವದಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ಶಾಖಾಮಠದ ಸ್ವಾಮೀಜಿಗಳು ಉಪಸ್ಥಿತರಿದ್ದರು.