ನಿವಾರ್ ಅಬ್ಬರ : ರಾಜ್ಯದ 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಬೆಂಗಳೂರು : ನಿವಾರ್ ಚಂಡಮಾರುತದ ಎಫೆಕ್ಟ್ ರಾಜ್ಯದ ಮೇಲೂ ಬೀರಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಮಿಳುನಾಡಿನ ಕರಾವಳಿ ಭಾಗದಲ್ಲಿ ನಿವಾರ್ ಚಂಡಮಾರುತದ ಅಬ್ಬರ ಜೋರಾಗಿದೆ. ಅಲ್ಲಿ ನಿವಾರ್ ಭಾರಿ ಅವಾಂತರಗಳನ್ನು ಸೃಷ್ಠಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ರಾಜ್ಯದ ಎಂಟು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ
ಸದ್ಯ ಈ ಎಂಟು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮಳೆಯಾಗುತ್ತಿದ್ದರೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿನ್ನೆ ಸಂಜೆಯಿಂದ ನಿರಂತರ ಮಳೆ ಸುರಿಯುತ್ತಿದೆ.
ಅಲ್ಲದೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel