ನವದೆಹಲಿ: ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದ ಹಿನ್ನೆಲೆ ಸುಪ್ರೀಂ ಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿದೆ. ಮಾಜಿ ಸಚಿವ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಅವರ ನೇತೃತ್ವದ ತ್ರಿ ಸದಸ್ಯ ಪೀಠ ನಾಲ್ಕು ವಾರದಲ್ಲಿ ಈ ಬಗ್ಗೆ ಉತ್ತರಿಸುವಂತೆ ನೋಟಿಸ್ ನೀಡಿದೆ.
ಈ ಹಿಂದೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದ ಎ.ಮಂಜು, ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಸಿರುವುದಾಗಿ ಆರೋಪಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಪೀಠ ಪ್ರಮಾಣ ಪತ್ರ ಸಲ್ಲಿಸಲು ಎ.ಮಂಜು ಗೆ ಸೂಚಿಸಿತ್ತು. ಆದರೆ ಪ್ರಮಾಣ ಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಈ ಅರ್ಜಿಯನ್ನು ವಜಾ ಮಾಡಲಾಗಿತ್ತು.
ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್
ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...








