ಬೆಂಗಳೂರು: ಕಳೆದ ತಿಂಗಳು ನಡೆದ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಹೀನಾಯ ಸೋಲು ಕಂಡು ಮುಖಭಂಗ ಅನುಭವಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು, ಬೆಳಗಾವಿ ಲೋಕಸಭಾ ಕ್ಷೇತ್ರವನ್ನಾದರೂ ಕೈವಶ ಮಾಡಿಕೊಳ್ಳಬೇಕೆಂಬ ಲೆಕ್ಕಾಚಾರದಲ್ಲಿದ್ದಾರೆ.
ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಗಳಲ್ಲಿ ಅಭ್ಯರ್ಥಿ ಆಯ್ಕೆ ಸೇರಿದಂತೆ ಗೆದ್ದೇ ಗೆಲ್ಲುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು. ಆದರೆ, ಸಭೆಯಲ್ಲಿ ಯಾವ ನಿರ್ಧಾರಕ್ಕೆ ಬರಲಾಗಿದೆ ಎಂಬುದರ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








