ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು 170ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಚೆನ್ನೈನ ಮಿಂಟ್ ಸೇತುವೆ ಪ್ರವೇಶದ್ವಾರದ ಬಳಿ 5 ಸಾವಿರಕ್ಕೂ ಹೆಚ್ಚು ಮಂದಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಕೋಪಗೊಂಡ ಪ್ರತಿಭಟನಾಕಾರರು ಪೊಲೀಸರ ನಡೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು 170ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಇನ್ನು ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದು, ಈ ವೇಳೆ ಹಲವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್:’ಮೊಬೈಲ್’ಮೂಲಕವೇ ‘ಜಮೀನಿನ ಪೋಡಿ ನಕ್ಷೆ’ Download ಮಾಡಿ
ರಾಜ್ಯದ ರೈತರಿಗೆ ಗುಡ್ ನ್ಯೂಸ್:'ಮೊಬೈಲ್'ಮೂಲಕವೇ 'ಜಮೀನಿನ ಪೋಡಿ ನಕ್ಷೆ' Download ಮಾಡಿಕೊಳ್ಳಿ ಹೇಗೆ ತಿಳಿಯೋಣ ಬನ್ನಿ.. ಪೋಡಿ ಎಂದರೇನು? “ಪೋಡಿ” ಎಂಬ ಪದವು ಬಹು ಮಾಲೀಕರ ನಡುವೆ...