ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ತೀವ್ರ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಹೊರಬಿದ್ದಿದ್ದು, ಕೊಪ್ಪಳದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆಯಾಗಿದ್ದಾರೆ, ಚಾಮರಾಜನಗರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಕೇಸ್‍ನ ಆರೋಪಿಗೆ ಜೀವಾವಧಿ ಶಿಕ್ಷೆಯಾಗಿದೆ.
ಬಾಲಕಿ ಅಪಹರಿಸಿ ಅತ್ಯಾಚಾರ, 10 ವರ್ಷ ಶಿಕ್ಷೆ…
ಕೊಪ್ಪಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅವಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಯುವಕನಿಗೆ ಕೊಪ್ಪಳದ ಪೋಕ್ಸೋ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗಬೇನಾಳ ಗ್ರಾಮದ ಅಶೋಕ ಅಲಿಯಾಸ್ ರವಿ(24) ಶಿಕ್ಷೆಗೆ ಗುರಿಯಾದ ಯುವಕ. ಕಳೆದ 2016 ರ ಜೂನ್ ನಲ್ಲಿ ಬಾಲಕಿಯನ್ನು ಅಪಹರಣ ಮಾಡಿ ಹುಲಿಗಿ ಗ್ರಾಮದ ಹೊರ ವಲಯಕ್ಕೆ ಹಾಗೂ ಮೈಸೂರು ಚಾಮುಂಡೇಶ್ವರಿ ಬೆಟ್ಟದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ.
ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪಿಎಸ್‍ಐ ಜಯಪ್ರಕಾಶ್ ಹಾಗೂ ಸಿಪಿಐ ಮೋಹನ್ ಪ್ರಸಾದ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಪೋಕ್ಸೋ ಪ್ರಕರಣದಡಿ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಸ್.ಎಂ.ಜಾಲವಾಡಿ, ಸಾಕ್ಷಿ ಆಧಾರಗಳ ಸಹಿತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಯುವಕ ಅಶೋಕನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ದಲಿತ ಬಾಲಕಿ ಮೇಲೆ ಅತ್ಯಾಚಾರ-ಜೀವಾವಧಿ ಶಿಕ್ಷೆ
ಚಾಮರಾಜನಗರ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಚಾಮರಾಜನಗರ ತಾಲೂಕು ಸರಗೂರು ಗ್ರಾಮದ ಸಮೀವುಲ್ಲಾ ಅಲಿಯಾಸ್ ಡಾಮ್ಟೆ ಎಂಬಾತನಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.
ಅಪರಾಧಿ ಸಮೀವುಲ್ಲಾನಿಗೆ ಐಪಿಸಿ ಕಲಂ 366ರ ಅನ್ವಯ 5 ವರ್ಷ ಸಾದಾ ಸಜೆ ಮತ್ತು 50 ಸಾವಿರ ರೂ. ದಂಡ, ಐಪಿಸಿ ಕಲಂ 376(ಎನ್) ಅನ್ವಯ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ಹಾಗೂ ಪೊಕ್ಸೊ ಕಾಯ್ದೆ ಕಲಂ 4 ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ, ಪೆÇಕ್ಸೊ ಕಾಯ್ದೆ ಕಲಂ 6 ರ ಅನ್ವಯ 10 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ ಪುರ ಅವರು ತೀರ್ಪು ನೀಡಿದ್ದಾರೆ.
ಆರೋಪಿ ಶಮೀವುಲ್ಲಾ ಸ್ಟವ್ ಮತ್ತು ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದ. ಚಾಮರಾಜನಗರದ ಗ್ರಾಮವೊಂದರ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ 2018ರ ಜುಲೈ 24 ರಂದು ತಮಿಳುನಾಡಿನ ತಮಿಳುಪುರ ಎಂಬ ಗ್ರಾಮಕ್ಕೆ ಬೈಕ್ ನಲ್ಲಿ ಕರೆದೊಯ್ದಿದ್ದ.
ಅಂದು ರಾತ್ರಿ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ದೈಹಿಕ ಸಂಪರ್ಕ ಮಾಡಿದ್ದ. ನಂತರ ತಮಿಳುಪುರದಿಂದ ಹೊರಟು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಖಾಸಗಿ ಲಾಡ್ಜ್ ವೊಂದರಲ್ಲಿ ಬಲವಂತವಾಗಿ ಇರಿಸಿ ಎರಡು ದಿನಗಳ ಕಾಲ ಲೈಂಗಿಕ ದೌರ್ಜನ್ಯ ನಡೆಸಿದ್ದ.
ಗ್ರಾಮಕ್ಕೆ ವಾಪಸ್ ಬಂದ ಬಾಲಕಿ ನಡೆದ ವಿಷಯ ತಿಳಿಸಿದ್ದಳು. ಈ ಬಗ್ಗೆ ಚಾಮರಾಜನಗರ ಪೂರ್ವ ಪೆÇಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಅಂದಿನ ಡಿವೈಎಸ್ಪಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದರು
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಎಸಗಿರುವ ಕೃತ್ಯ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಇತಿಹಾಸದಲ್ಲಿ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿರುವುದು ಇದೇ ಮೊದಲು ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel