ಕೊರೊನಾ ನಿಯಂತ್ರಣ ಮಾಡುವುದಕ್ಕೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಘಟನೆ ನಡೆದಿದೆ. ಮಾಜಿ ಶಾಸಕ ಸುರೇಶ್ ಗೌಡ ಇಂದು ತುಮಕೂರಿನ ಹೊನ್ನುಡಿಕೆ ಗ್ರಾಮದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು. ಸಂಸದೆ ಶೋಭಾ ಕರಂದ್ಲಾಜೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನೂರಾರು ಜನ ಮಾಸ್ಕ್ ಧರಿಸಿ ಕುಳಿತಿದ್ದರು. ಅಲ್ಲದೆ ನಿನ್ನೆಯಷ್ಟೇ ಕೇಂದ್ರ ಸರ್ಕಾರ ನೀಡಿದ ಮಾರ್ಗ ಸೂಚಿಯಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳು ನಡೆಸುವಂತಿಲ್ಲ ಎಂದು ಹೇಳಿತ್ತು. ಇದೀಗ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ನಿರ್ಲಕ್ಷ್ಯ ತೋರಿದ್ದಾರೆ. ಆ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....