ಮೈಸೂರು : ಅನ್ನಭಾಗ್ಯದ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ, ಅದು ಕೂಡ ನಿಮ್ಮ ಸಾಧನೆಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಟೀಕೆ ವಿಚಾರ ಸಂಬಂಧ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಪ್ರಧಾನಿ ಮೇಲೆ ವಿಪಕ್ಷಗಳು ಮಾಡಿರುವ ಪದ ಪ್ರಯೋಗ ದೇಶದ ಜನರು ಮೆಚ್ಚಲ್ಲ. ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸಾಧನೆ ಏನು, ಮೋದಿ ಸಾಧನೆ ಏನು. ದೊಡ್ಡ ದೊಡ್ಡವರೆಲ್ಲಾ ಅಪ್ರಬುದ್ಧರಾಗಿ ಮಾತಾಡುತ್ತಿದ್ದಾರೆ. ದೇವರಾಜ ಅರಸ್ ಅವರನ್ನು ಮೋದಿಯಲ್ಲಿ ಕಾಣುತ್ತಿದ್ದೇನೆ. ಅಹಿಂದ ಪ್ರಧಾನಿಯನ್ನು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಪ್ರಧಾನಿಯನ್ನು ಅನ್ ಫಿಟ್ ಅಂತಾರೆ. ಹಾಗಾದರೆ ನೀವು ಸಿಎಂ ಆಗುವುದಕ್ಕೆ ಫಿಟ್ ಆಗಿದ್ರಾ..? ಎಂದು ಪ್ರಶ್ನಿಸಿದ ವಿಶ್ವನಾಥ್, ಮೋದಿ ಅವರದ್ದು ಗುಜರಾತ್ ಮಾಡೆಲ್ ಇದೆ, ನಿಮ್ಮ ಮಾಡೆಲ್ ಏನಿದೆ ಎಂದು ಗುಡುಗಿದರು. ಇದೇ ವೇಳೆ ಅನ್ನಭಾಗ್ಯದ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ ಅದು ಕೂಡ ನಿಮ್ಮ ಸಾಧನೆಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.