ಸರ್ಕಾರ ತಕ್ಷಣವೇ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕು : ಸಿದ್ದರಾಮಯ್ಯ
ಬೆಂಗಳೂರು : ಕಳೆದ 8 ದಿನಗಳಿಂದ ಆಶಾ ಕಾರ್ಯಕರ್ತರು ಮುಷ್ಕರನಿರತರಾಗಿದ್ದಾರೆ. ‘ಕೊರೊನಾ ವಾರಿಯರ್ಸ್’ ಎಂದು ಬಣ್ಣಿಸಿ ಹೂಮಳೆಗರೆಯುವ ಸರ್ಕಾರ, ಜೀವದ ಹಂಗು ತೊರೆದು ಸೋಂಕಿತರ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಬೀದಿಯಲ್ಲಿ ನಿಲ್ಲಿಸಿದೆ. ಸರ್ಕಾರ ತಕ್ಷಣ ಗಮನ ಹರಿಸಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕು ಎಂದು ಮಾಜಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಸಿದ್ದರಾಮಯ್ಯ..
ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇದರಲ್ಲಿ ಅನೇಕರಿಗೆ ಕೋವಿಡ್ ಸೋಂಕು ತಗುಲಿದೆ. ಸರ್ಕಾರ ಇವರನ್ನನು ಕೊರೊನಾ ವಾರಿಯರ್ಸ್ ಎಂದ ಕರೆಯಿತು. ಪ್ರಧಾನಿ ಮೋದಿಯವರಾದಿಯಾಗಿ ಚಪ್ಪಳೆ ತಟ್ಟಿ ಹೂಮಳೆಗೆರೆದರು. ಇದಕ್ಕೆ ಜನರು ಸಹ ಸಹಮತತ ವ್ಯಕ್ತಪಡಿಸಿದರು. ಆದ್ರೆ ಇವರಿಗೆ ನೀಡುತ್ತಿರುವ ವೇತಮ ಕೇವಲ ರೂ.4000 ರಿಂದ 6000 ಸಾವಿರ ರೂ ಗಳು ಮಾತ್ರ. ಸರ್ಕಾರ ರೂ. 80000 ರಿಂದ 9000 ಗಳನ್ನು ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಿತ್ತು. ಆದರೆ ಇದುವರೆಗೂ ಕೂಡ 1 ರೂಪಾಯಿ ಕೂಡ ಹೆಚ್ಚಿಸಿಲ್ಲ. ಕಳೆದ ಏಪ್ರಿಲ್ ನಲ್ಲಿ ಸರ್ಕಾರ ಒಂದು ಬಾರಿ ವಿಶೇಷ ಪ್ಯಾಕೇಜ್ ಎಂದು ರಾಜ್ಯದ ಸಹಕಾರ ಇಲಾಖೆಯಿಂದ ರೂ.3000 ಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಇದು ಶೇ 50% ರಷ್ಟು ಆಶಾ ಕಾರ್ಯಕರ್ತೆರಿಗೆ ತಲುಪಿಲ್ಲ ಎಂದು ದೂರಿದ್ದಾರೆ.
ಜೊತೆಗೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.12000 ಗೌರವಧನ ಖಾತರಿಪಡಿಸಬೇಕು. ಕೋವಿಡ್ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
