ನ್ಯೂಯಾರ್ಕ್: ಅಮೆರಿಕದಲ್ಲಿ ಕೊರೊನಾ ವೈರಸ್ ಅಲ್ಲೋಲ ಕಲ್ಲೋಲ ಸೃಷ್ಠಿ ಮಾಡಿದೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯೇ(ಡಬ್ಲ್ಯುಎಚ್‌ಒ) ಪ್ರಮುಖ ಕಾರಣ ಎಂದು ಗಂಭೀರವಾಗಿ ಆರೋಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಅದಕ್ಕೆ ನೀಡುತ್ತಿರುವ ಧನಸಹಾಯವನ್ನು ರದ್ದು ಮಾಡುವುದಾಗಿ ಘೋಷಿಸಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿನ ವಿಷಯದಲ್ಲಿ ಡಬ್ಲ್ಯುಎಚ್‌ಒ ಚೀನಾದ ಪರವಾಗಿ ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದ್ದ ಟ್ರಂಪ್, ಈಗ ಇನ್ನೊಂದು ಹೆಜ್ಜೆ ಮುಂದಕ್ಕೆ ಹೋಗಿ ಧನಸಹಾಯ ರದ್ದು ಮಾಡಲು ತೀರ್ಮಾನಿಸಿದ್ದಾರೆ. ಈ ಸಂಬಂಧ ತಮ್ಮ ಟ್ವಿಟ್ಟರ್ ಖಾತೆಯಲ್ಲಿಯೂ ಪ್ರಕಟಿಸಿದ್ದಾರೆ.
ವಿಶ್ವ ಸಂಸ್ಥೆಯ ರಾಷ್ಟ್ರಗಳ ಪೈಕಿ ಅತಿ ಹೆಚ್ಚು ಆರ್ಥಿಕ ಸಹಕಾರವನ್ನು ನೀಡುತ್ತಿರುವ ದೇಶವೆಂದರೆ ಅದು ಅಮೆರಿಕ. ಕಳೆದ ಆರ್ಥಿಕ ವರ್ಷದಲ್ಲಿ ಅಮೆರಿಕ ವಿಶ್ವ ಆರೋಗ್ಯ ಸಂಸ್ಥೆಗೆ 400 ದಶಲಕ್ಷ ಡಾಲರ್ ಧನಸಹಾಯ ಮಾಡಿದೆ. ಆದರೆ ಇದರ ಹೊರತಾಗಿಯೂ ಸೋಂಕು ವ್ಯಾಪಿಸುವುದಕ್ಕೆ ಸಂಬಂಧಿಸಿದಂತೆ ಅದು ಪಾರದರ್ಶಕತೆ ಕಾಯ್ದುಕೊಳ್ಳದೇ, ಚೀನಾದ ಪರವಾಗಿ ಪಕ್ಷಪಾತ ಮಾಡಿದೆ ಎನ್ನುವುದು ಟ್ರಂಪ್ ಅವರ ಗಂಭೀರ ಆರೋಪವಾಗಿವೆ..