ವಿಜಯಪುರ: ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಕಾರಣಕ್ಕೆ ಕಳೆದ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಪೋಷಕರ ವಿರೋಧದ ನಡುವೆಯೂ ಗುರುವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.
ಆದರೆ, ಪರೀಕ್ಷೆಗೂ ಮುನ್ನವೇ ವಿಜಯಪುರದ ಪ್ರತಿಷ್ಟಿತ ಖಾಸಗಿ ಶಾಲೆಯೊಂದರ ೧೦ನೇ ತರಗತಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಆಕೆಯನ್ನು ವಿಜಯಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರದಿಂದ ಆರಂಭವಾಗಲಿರುವ ಪರೀಕ್ಷೆಗೆ ವಿದ್ಯಾರ್ಥಿನಿ ವಂಚಿತಳಾದರೂ, ಸಪ್ಲೆಮೆಂಟರಿ ಪರೀಕ್ಷೆ ವೇಳೆ ಪ್ರಥಮ ಪರೀಕ್ಷೆ ಎಂದೇ ಪರಿಗಣಿಸಿ ಅವಕಾಶ ನೀಡಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.
ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!
ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...