ಜೈಪುರ: ಓರಲ್ ಸೆಕ್ಸ್‌ಗೆ ನಿರಾಕರಿಸಿದ್ದಕ್ಕೆ 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹತ್ಯೆ ಮಾಡಿ 9 ದಿನಗಳ ಹಿಂದೆ ಶವವನ್ನು ನೀರಿಲ್ಲದ ಕೊಳದಲ್ಲಿ ಬಿಸಾಡಿದ್ದಾರೆ. ಈ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಸ್ನೇಹಿತರು ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಶವವನ್ನು ನೀರಿಲ್ಲದ ಕೊಳದಲ್ಲಿ ಎಸೆದು ಹೋಗಿದ್ದಾರೆ ಎಂದು ಬರಾನ್ ಜಿಲ್ಲಾ ಪೊಲೀಸರು ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಮುರಳೀಧರ್ ಪ್ರಜಾಪತಿ (32) ಮತ್ತು ಸುರೇಂದ್ರ ಯಾದವ್ ಎಂದು ಗುರುತಿಸಲಾಗಿದೆ.
ಈ ಪೈಕಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವನಿಗಾಗಿ ಬಲೆ ಬೀಸಲಾಗಿದೆ. ಯಾದವ್ ಮತ್ತು ಬೈರ್ವಾ ಒಟ್ಟಿಗೆ ಮದ್ಯ ಸೇವಿಸಿದ್ದರು. ನಂತರ ಪ್ರಜಾಪತಿಯ ಸಹೋದರಿಯನ್ನು ಭೇಟಿ ಮಾಡಲು ಹತ್ತಿರದ ಹಳ್ಳಿಗೆ ಹೋಗಿದ್ದಾರೆ.
ಹಿಂದಿರುಗುವಾಗ ತಮ್ಮೊಂದಿಗೆ ಓರಲ್ ಸೆಕ್ಸ್ ಮಾಡುವಂತೆ ಪ್ರಜಾಪತಿ ಮತ್ತು ಸುರೇಂದ್ರ ಯಾದವ್ ಕೇಳಿಕೊಂಡಿದ್ದಾರೆ. ಇದಕ್ಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬರಾನ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








