ಕೇಂದ್ರ ಸರಕಾರದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

1 min read
BSF Saaksha Tv

ಕೇಂದ್ರ ಸರಕಾರದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ನವದೆಹಲಿ: ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 2788 ಕಾನ್ಸ್​ಟೇಬಲ್  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ. ಅರ್ಜಿದಾರರು ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು. ಮತ್ತು ಅಭ್ಯರ್ಥಿಗಳು ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಹಾಗೂ ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು. ಜೊತೆಗೆ ಟ್ರೇಡ್​​ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ಅಲ್ಲದೇ ಅಭ್ಯರ್ಥಿಯ ವಯಸ್ಸು ಆಗಸ್ಟ್​ 1, 2021ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು. ಹಾಗೂ ಆಯಾಯ ವರ್ಗಕ್ಕೆ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅಭ್ಯರ್ಥಿಯ ವಯಸ್ಸು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15 ರಿಂದ 28/02/2022 ರವಗೆ ಇದ್ದು, ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಆಯ್ಕೆ ಪ್ರಕ್ರಿಯೆಯು ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಟ್ರೇಡ್ ಪರೀಕ್ಷೆ, ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd