ಕೊರಿಯಾ ಓಪನ್ ಬ್ಯಾಡ್ಮಿಂಟನ್ – ಸೆಮಿಫೈನಲ್ಗೇರಿದ ಪಿವಿ ಸಿಂಧು ಮತ್ತು ಕಿಡಂಬಿ ಶ್ರೀಕಾಂತ್

1 min read

ಕೊರಿಯಾ ಓಪನ್ ಬ್ಯಾಡ್ಮಿಂಟನ್ – ಸೆಮಿಫೈನಲ್ಗೇರಿದ ಪಿವಿ ಸಿಂಧು ಮತ್ತು ಕಿಡಂಬಿ ಶ್ರೀಕಾಂತ್

ಕೊರಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವ ನಂ 7, ಪಿವಿ ಸಿಂಧು ಮತ್ತು ವಿಶ್ವ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.

ಇಂದು ಸನ್‌ಚಿಯಾನ್‌ನಲ್ಲಿ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಕಿಡಂಬಿ ಶ್ರೀಕಾಂತ್ ಕೊರಿಯಾದ ವಾನ್ಹೋ ಸನ್ ಅವರನ್ನು 21-12, 18-21, 21-12 ರಿಂದ ಸೋಲಿಸಿದರು. ಶ್ರೀಕಾಂತ್ ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್‌ನ ಎಂಟನೇ ಶ್ರೇಯಾಂಕದ ಕುನ್ಲವುಟ್ ವಿಟಿಡ್ಸರ್ನ್ ಮತ್ತು ಇಂಡೋನೇಷ್ಯಾದ ಜೊನಾಟನ್ ಕ್ರಿಸ್ಟಿ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು 21-10 ಮತ್ತು 21-16 ನೇರ ಸೆಟ್‌ಗಳಿಂದ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಸೋಲಿಸಿದರು. ಸಿಂಧು ಸೆಮಿಫೈನಲ್‌ನಲ್ಲಿ ಜಪಾನ್‌ನ ಸೈನಾ ಕವಾಕಮಿ ಮತ್ತು ಕೊರಿಯಾದ ಆನ್ ಸೆಯಂಗ್ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd