ಮಂಡ್ಯ: ಸ್ವಂತ ಶ್ರಮದಿಂದ ಕೆರೆಗಳಿಗೆ ಮರು ಜೀವ ನೀಡುವ ಮೂಲಕ ಖ್ಯಾತಿ ಪಡೆದಿರುವ ಕೆರೆ ಕಾಮೇಗೌಡರು ಕೊರೊನಾವನ್ನೇ ಗೆದ್ದಿದ್ದಾರೆ.
ಕಳೆದ ವಾರ ಕೆರೆ ಕಾಮೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಕಾಮೇಗೌಡರಿಗೆ ನಡೆಸಿದ ಕೋವಿಡ್ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಕೆರೆ ಕಾಮೇಗೌಡರನ್ನು ಡಿಶ್ಚಾರ್ಜ್ ಮಾಡಲು ಕೋವಿಡ್ ಆಸ್ಪತ್ರೆಯಲ್ಲಿ ಸಿದ್ದತೆ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ನಿವಾಸಿಯಾದ ಕಾಮೇಗೌಡರು ಬತ್ತಿಹೋದ ಕೆರೆಗಳಿಗೆ ಮರು ಜೀವ ನೀಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್‍ಕಿ ಬಾತ್‍ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದಾದ ಒಂದೇ ದಿನದಲ್ಲಿ ಕಾಮೇಗೌಡರ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬಂತು.
ಇದೇ ಸಂದರ್ಭದಲ್ಲೇ ಕೆರೆ ಕಾಮೇಗೌಡರಿಗೆ ಕಾಲಿನ ಗಾಯ ತೊಂದರೆ ಕೊಡಲಾರಂಭಿಸಿತು. ಚಿಕಿತ್ಸೆಗಾಗಿ ಹಲವು ಆಸ್ಪತ್ರೆಗಳಿಗೆ ತಿರುಗಾಡಿದ್ದರು. ಈ ವೇಳೆ ಕೊರೊನಾ ಕಾಮೇಗೌಡರ ದೇಹವನ್ನೂ ಹೊಕ್ಕಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಕಳೆದ ಒಂದು ವಾರದಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಾಮೇಗೌಡರ ಕಾಲಿನ ಗಾಯಕ್ಕೆ ಮನೆಯಲ್ಲಿಯೇ ಚಿಕಿತ್ಸೆ ನೀಡುವಂತೆ ವೈದ್ಯರು ಸೂಚನೆ ನೀಡಿದ್ದಾರೆ.
Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…
5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....