ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಗಾನಗಂಧರ್ವ ಎಸ್ ಪಿ ಬಾಲಸುಬ್ರಹ್ಮಣಂ ಅವರು, ಇದೀಗ ಗುಣಮುಖರಾಗಿದ್ದಾರೆ. ಈ ಮೂಲಕ ಎಸ್ ಪಿ ಬಿ ಅವರು ಚೇತರಿಸಿಕೊಳ್ಳುವಂತೆ ಸಲ್ಲಿಸಿದ್ದ ಕೋಟ್ಯಾಂಟರ ಅಭಿಮಾನಿಗಳ ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ.
74 ವರ್ಷದ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಕುರಿತಂತೆ ಪುತ್ರ ಚರಣ್ ಅವರು ಸ್ಪಷ್ಟನೆ ನಿಡಿದ್ದಾರೆ. ಆಗಸ್ಟ್ 5 ರಂದು ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಿ ಅವರ ಸ್ಥಿತಿ ತೀವ್ರ ಗಂಭೀರವಾಗಿತ್ತು. ಅಲ್ಲದೇ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಅವರನ್ನು ವೆಂಟಿಲೇಟರ್ ನಲ್ಲಿರಿಸಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.