ಕಳೆದ ಜೂನ್ ನಿಂದ ಶಾಲೆಗಳು ಪ್ರಾರಂಭವಾಗಿಲ್ಲ . ಅನೇಕ ಖಾಸಗಿ ಶಾಲೆಗಳ ಶಿಕ್ಷಕರು ಬಹಳ ದುಸ್ಥಿತಿಯಲ್ಲಿದ್ದಾರೆ ಎಂದು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಚಾಮರಾಜನಗರದಲ್ಲಿ ಈ ಬಗ್ಗೆ ಮಾತನಾಡಿರುವ ಅವರು ಖಾಸಗಿ ಶಾಲೆಗಳಲ್ಲಿಯೂ ದಾಖಲಾತಿಗೆ ಸೂಚನೆ ನೀಡಿದ್ದೇವೆ. ಇನ್ನೂ ಒಂದು ಟರ್ಮ್ ನ ಅಧಿಕೃತ ಶುಲ್ಕವನ್ನು ಮಾತ್ರ ತಗೆದುಕೊಳ್ಳುವಂತೆ ನಿರ್ದೇಶಿಸಿದ್ದೇವೆ. ಇನ್ನೂ ಪೂರ್ತಿ ಶುಲ್ಕವನ್ನು ಶಾಲಾ ಶಿಕ್ಷಕರ ವೇತನಕ್ಕಾಗಿ ಮಾತ್ರ ಉಪಯೋಗಿಸಬೇಕೆಂದು ಈಗಾಗಲೇ ಸೂಚನೆ ಕೊಟ್ಟಿದ್ದೇವೆ. ಹೆಚ್ಚಾಗಿ ಶುಲ್ಕ ತೆಗೆದುಕೊಂಡಿದ್ದು ಗೊತ್ತಾದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.