ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ಬೆನ್ನು ಹತ್ತಿರುವ ಸಿಸಿಬಿ ಪೊಲೀಸರ ತನಿಖೆ ವೇಳೆ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ಡ್ರಗ್ಸ್ ಪೆಡ್ಲರ್ ವಿರೇನ್ ಖನ್ನಾ ಮನೆಯಲ್ಲಿ ಒಂದು ಪೊಲೀಸ್ ಯೂನಿಫಾರಂ ಪತ್ತೆಯಾಗಿದ್ದು, ಅದು ಯಾರದ್ದು, ಹೇಗೆ ಅವನ ಮನೆಗೆ ಬಂತು ಎಂಬುದರ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ವಿಚಾರವನ್ನು ಬಹಿರಂಗಡಿಸಿದ್ದಾರೆ. ಕೋರ್ಟ್‍ನಿಂದ ಸರ್ಚ್ ವಾರೆಂಟ್ ಪಡೆದು ಬೆಳಿಗ್ಗೆಯಿಂದ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ಯೂನಿಫಾರಂ ಪತ್ತೆಯಾಗಿದೆ. ಅದು ಹೇಗೆ ಅಲ್ಲಿ ಬಂತು ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ನಟಿ ಸಂಜನಾ ಗಲ್ರಾನಿ ಮನೆ ಮೇಲೂ ದಾಳಿ ಮಾಡಿ ಕೆಲ ವಸ್ತುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ. ಈಗಾಗಲೇ 6 ಜನರನ್ನು ಬಂಧಿಸಿದ್ದೇವೆ. ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು, ಇನ್ನೂ ಹಲವರ ವಿಚಾರಣೆ ನಡೆಯಬೇಕಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…
5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....