ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಶಿವರಾಜ್‌ಕುಮಾರ್
ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟಿಸುತ್ತಿದ್ದಾರೆ. ಈ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಜೈಲರ್ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಈ ವಾರ ನಾಲ್ಕೈದು ದಿನಗಳ ಅವಧಿಯಲ್ಲಿ ಅವರ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದಾರೆ.
ಜೈಲರ್ ಚಿತ್ರ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಕೂಡ ಶಿವರಾಜ್ ಕುಮಾರ್ ಅವರ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
https://mobile.twitter.com/NimmaShivanna/status/1593233838591049734?s=08
ಜೈಲರ್ ಸಿನಿಮಾದಲ್ಲಿ ನಟಿಸುತ್ತಿರುವ ವಿಷಯವನ್ನು ಶಿವರಾಜಕುಮಾರ್ ಖಚಿತ ಪಡಿಸಿದ್ದು, ರಜನಿಕಾಂತ್ ಜೊತೆಗೆ ನಟಿಸಲು ಯಾರಿಗಾದರೂ ಇದೊಂದು ಒಳ್ಳೆಯ ಅವಕಾಶ ಮತ್ತು ಇದರಿಂದ ನನಗೆ ಖುಷಿಯಾಗಿದೆ. ಅವರು ನನ್ನನ್ನು ಬಾಲ್ಯದಿಂದಲೂ ತಿಳಿದಿದ್ದು, ಅವರೊಂದಿಗೆ ನಾನು ವಿಶೇಷ ಬಾಂಧವ್ಯ ಹೊಂದಿದ್ದೇನೆ. ರಜನಿ ಸರ್ ಮತ್ತು ನನ್ನನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ ಎಂದು ತಿಳಿಸಿದ್ದಾರೆ.
ಜೈಲರ್ ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ.








