ನಮ್ಮದು ಧರ್ಮ ರಾಜಕಾರಣವೆಂದು ಒಪ್ಪಿಕೊಳ್ಳುತ್ತೇನೆ : ಆರ್.ಅಶೋಕ್ R. Ashok saaksha tv
ಬೆಂಗಳೂರು : ನಮ್ಮದು ಧರ್ಮ ರಾಜಕಾರಣ ಎಂದು ಒಪ್ಪಿಕೊಳ್ಳುತ್ತೇನೆ. ಆದ್ರೆ ನಮ್ಮದು ಜಾತಿ ಇಲ್ಲದ ರಾಜಕಾರಣ ಎಂದು ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಯಾವಾಗಲೂ ಜಾತಿ ಲೆಕ್ಕದಲ್ಲಿ ರಾಜಕಾರಣ ಮಾಡುತ್ತ ಬಂದಿದೆ.
ಹಿಂದೆ ಧರ್ಮ ಒಡೆಯುವ ಕೆಲಸ ಮಾಡಿತ್ತು. ಅವರು ಜಾತಿ ವಿಭಜನೆ ಮಾಡಲು ಹೋಗಿ ಈ ಸ್ಥಿತಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಎಸ್ ವೈ ರಾಜ್ಯ ಪ್ರವಾಸದ ಬಗ್ಗೆ ಮಾತನಾಡಿ, ಕಾಂಗ್ರೆಸ್ ನವರು ಐದು ವರ್ಷ ಮಲಗಿರುತ್ತಾರೆ.
ಯುದ್ಧ ಕಾಲದಲ್ಲಿ ಹೋರಾಟ ಮಾಡುತ್ತಾರೆ. ನಮ್ಮ ರಾಜ್ಯಾಧ್ಯಕ್ಷರು ಈಗಾಗಲೇ ಹದಿನೈದು ಬಾರಿ ರಾಜ್ಯ ಪ್ರವಾಸ ಮಾಡಿದ್ದಾರೆ.
ಯಡಿಯೂರಪ್ಪ ಕೂಡ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.









