ಬೆಂಗಳೂರು: ಲಾಕ್‌ಡೌನ್ ಅಗಿ ಮೂರು ತಿಂಗಳ ಬಳಿಕ ಬೆಂಗಳೂರು ನಗರ ಪೊಲೀಸರು ಮಹಾಮಾರಿ ಕೊರೊನಾಗೆ ಬಲಯಾಗುತ್ತಿರುವುದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ಅವರನ್ನು ಕಂಗಾಲು ಮಾಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರಿಗೆ ಹೊಸ ಮಾರ್ಗಸೂಚಿ ನೀಡಿರುವ ಕಮೀಷನರ್, ೫೫ ವರ್ಷ ಮೇಲ್ಪಟ್ಟ ಪೊಲೀಸರು ಠಾಣೆಗ ಬರಬಾರದು ಹಾಗೂ ಆರೋಪಿಗಳನ್ನು ಬಂಧಿಸುವ ಮುನ್ನ ಸ್ನಾನ ಮಾಡಿ ನಂತರ ತಮ್ಮ ಕಷ್ಟಡಿಗೆ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಯಾವುದೇ ಆರೋಪಿಯನ್ನು ಬಂಧಿಸುವ ಮುನ್ನ ಇನ್ನು ಮುಂದೆ ಅವರು ಸ್ನಾನ ಮಾಡುವುದು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುವ ಮುನ್ನ ಅವರು ಬಟ್ಟೆಗಳನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಪೊಲೀಸರು ಖಚಿತಪಡಿಸಿಕೊಳ್ಳಬೇಕು ಎಂದು ಭಾಸ್ಕರ್ ರಾವ್ ಆದೇಶಿಸಿದ್ದಾರೆ.
ವಿವಿಪುರಂ ಹಾಗೂ ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯ ಇಬ್ಬರು ಪೊಲೀಸರು ಕೊರೊನಾಗೆ ಬಲಿಯಾಗಿರುವುದು ಈ ಆತಂಕಕ್ಕೆ ಕಾರಣವಾಗಿದೆ.
ಕೆಲ ದರೋಡೆ, ಕೊಲೆ ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ಕೊವಿಡ್-೧೯ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರಿಗೂ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಕಮೀಷನರ್ ಕೊಟ್ಟ ಕಟ್ಟಪ್ಪಣೆಯಲ್ಲೇನಿದೆ ಗೊತ್ತಾ..?
* ಪ್ರತಿ ಠಾಣೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಇರಬೇಕು. ಕುಡಿಯಲು, ಸ್ನಾನ, ಕೈಕಾಲು ತೊಳೆಯಲು, ಮಾಸ್ಕ್ ಸ್ಯಾನಿಟೈಸರ್, ಪೇಸ್ ಶೀಲ್ಡ್ ಇರಬೇಕು. ಬಿಸಿ ನೀರಿನಿಂದ ಆರೋಪಿಗಳ ಸ್ನಾನ ಮಾಡಿಸಿದ ಬಳಿಕ ಅರೆಸ್ಟ್ ಮಾಡಬೇಕು.
* ಏನೇ ಸಮಸ್ಯೆ ಬಂದ್ರು ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, ಸರ್ಕಾರ ಸಮಾಜ ನಮ್ಮನ್ನ ನಂಬಿದೆ.
* ಎಲ್ಲಾ ಸ್ಟೇಷನ್ ನಲ್ಲಿ ೫೫ ವರ್ಷ ಮೇಲ್ಪಟ್ಟವರು ಮನೆಯಲ್ಲಿ ಇರಬೇಕು. ಬೆಂಗಳೂರು ಬಿಡುವಂತಿಲ್ಲ. ಅಧಿಕಾರಿಗಳು ಮಾನಿಟರ್ ಮಾಡಬೇಕು.
* ಸಾಧ್ಯವಾದಷ್ಟು ಯುವ ಹೋಂ ಗಾರ್ಡ್ ಬಳಕೆ ಮಾಡಿಕೊಳ್ಳಿ. ಜಂಟಿ ಸಿಪಿ ಡಿಸಿಪಿಗಳು ಮಾರ್ಗದರ್ಶನ ಮಾಡ್ತಾರೆ.
* ಶಾಮಿಯಾನ ಹಾಕಿಕೊಂಡು ಠಾಣೆ ಹೊರಗಡೆ ಅಲ್ಲೆ ಪ್ರಕರಣಗಳ ವಿಲೇವಾರಿ ಮಾಡಬೇಕು. ಆರೋಪಿಗಳು ಯಾರೇ ಅಗಲಿ ಯಾರನ್ನು ಮುಟ್ಟಬಾರದು.
* ಹೊಯ್ಸಳ ಮತ್ತು ಚೀತಾ ಅನವಶ್ಯಕವಾಗಿ ಸುತ್ತಾಡಬಾರದು. ಸಮಸ್ಯೆ ಇದ್ರೆ, ಕಾಲ್ ಬಂದ್ರೆ ಮಾತ್ರ ಹೋಗಬೇಕು, ಸುಮ್ಮನೆ ಸ್ಟೇಷನ್‌ಗೆ ಬರಬಾರದು.
* ಮುಖ್ಯ ಕೇಸ್‌ಗಳಲ್ಲಿ ಮಾತ್ರ ಆರೋಪಿಗಳನ್ನ ಬಂಧಿಸಬೇಕು. ಸುಮ್ಮನೆ ಬಂಧಿಸುವ ಅವಶ್ಯಕತೆ ಇಲ್ಲ. ಅನಗತ್ಯವಾಗಿ ಯಾರನ್ನು ಠಾಣೆಗೆ ಕರೆ ತಂದು ಕೂರಿಸಬಾರದು.
* ಎಲ್ಲಾ ಠಾಣೆ ವ್ಯಾಪ್ತಿಯಲ್ಲಿ ಒಂದು ಕಲ್ಯಾಣ ಮಂಟಪವನ್ನು ಗುರುತಿಸಿಕೊಳ್ಳಬೇಕು.
* ನಾವು ಉಪಯೋಗಿಸುವ ವಾಹನಗಳು ಪ್ರತಿದಿನ ಸ್ಯಾನಿಟೈಸ್ ಆಗಬೇಕು. ಬೆಂಕಿ ಅನಾಹುತ ಆಗದಂತೆ ಸ್ಯಾನಿಟೈಸ್ ಮಾಡಬೇಕು.
* ನಾವು ಕ್ವಾರಂಟೈನ್ ಆಗಿದ್ದೀವಿ ಅಂತ ಸಾರ್ವಜನಿಕರಿಗೆ ನಮ್ಮ ಸೇವೆಯಿಂದ ಕೊರತೆ ಆಗಬಾರದು.
* ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಒದಗಿಸುವಾಗ ಗ್ಲೌಸ್ ಹಾಕಬೇಕು, ದೂರದಲ್ಲಿ ನಿಂತು ಮಾತನಾಡಬೇಕು.
* ಸಿಬ್ಬಂದಿಗೆ ಊಟ ತಿಂಡಿ ಸರಿಯಾಗಿ ಅಗಬೇಕು.
* ಪೊಲೀಸ್ ಕ್ವಾಟ್ರಸ್‌ಗಳಲ್ಲಿ ಸ್ವಚ್ಚತೆ ಇರಬೇಕು, ಎಲ್ಲ ಮನೆಗಳಿಗೆ ಸ್ಯಾನಿಟೈಸರ್ ಮಾಸ್ಕ್ ಕೊಡಬೇಕು.