ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೋಲಾಹಲ ಜೋರಾಗಿರುವಾಗಲೇ ನಟಿ ಸಂಜನಾಗೆ ಇಂದು ಬೆಳ್ಳಂಬೆಳಿಗ್ಗೆ ಸಿಸಿಬಿ ಶಾಕ್ ಕೊಟ್ಟಿದ್ದು, ಇದೀಗ ಸಂಜನಾ ಬಂಧನವಾಗಿದೆ. ಇದರ ಬೆನ್ನಲ್ಲೇ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಶಾಂತ್ ಸಂಬರಗಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದ ಸಂಜನಾ ವಿರುದ್ಧ ಸಂಬರಗಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ಈ ಬಗ್ಗೆ ಮಾತನಡಿರುವ ಸಂಬರಗಿ, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾವತ್ತು ಯಾವತ್ತು ಕರ್ಮ ಆಗುತ್ತೋ ಅದನ್ನು ಸ್ವಚ್ಚಗೊಳಿಸಲು ಸಿಸಿಬಿಯವರು ಬರುತ್ತಾರೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರು, ಒಂದು ದಿನ ಕಾನೂನಿಗೆ ತಲೆಬಾಗಲೇಬೇಕು. ಸಂಜನಾ ನನ್ನ ವಿರುದ್ಧ ಅಸಭ್ಯ ಪದಗಳನ್ನು ಬಳಕೆ ಮಾಡಿದ್ದಾರೆ. ನನ್ನ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದ್ದೇನೆ ಎಂದು ತಿಳಿಸಿದ್ದರು.