ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ರಿಯಾ ಹಾಗೂ ಆಕೆಯ ತಮ್ಮನಿಗೂ ಡ್ರಗ್ಸ್ ಲಿಂಕ್ ಇರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಲಾಗಿದೆ. ಅಲ್ಲದೇ ನಟಿ ರಿಯಾ ಚಕ್ರವರ್ತಿಯನ್ನು ಸತತವಾಗಿ ಎನ್ ಸಿ ಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಮತ್ತೊಮ್ಮೆ ರಿಯಾ ಚಕ್ರವರ್ತಿ ಮಾದಕ ವಸ್ತು ನಿಯಂತ್ರಣ ಬ್ಯೂರೋ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಈಗಾಗಲೇ ರಿಯಾ ಎನ್ಸಿಬಿ ಕಚೇರಿಗೆ ಆಗಮಿಸಿದ್ದು, ಆಕೆಯನ್ನು ಬಂಧಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.