ರೋಹಿಂಗ್ಯಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ – 8 ಮಂದಿ ಸಾವು
ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ ನ ಗಡಿಭಾಗದಲ್ಲಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇಸ್ಲಾಮಿಕ್ ಸೆಮಿನರಿ ಮೇಲೆ ನಡೆಸಲಾದ ದಾಳಿಯಲ್ಲಿ ಸುಮಾರು 8 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶಿಬಿರದ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಕೆಲವರನ್ನು ತೀವ್ರವಾಗಿ ಥಳಿಸಿದ್ದಾರೆ. ಇನ್ನೂ ಕೆಲವರನ್ನು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇನ್ನೂ 3 ವಾರಗಳ ಹಿಂದೆ ರೋಹಿಂಗ್ಯಾ ಸಮುದಾಯದ ನಾಯಕನನ್ನು ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.