ಇಂದಿನಿಂದ ಸೆ. 9ರವರೆಗೆ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಲವು ಕಡೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಹೀಗಾಗಿ ಈ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ 5 ದಿನಗಳ ಕಾಲ ವರುಣಾರ್ಭಟ ಜೋರಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.