ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಹಗಲು ರಾತ್ರಿ ಎನ್ನದೇ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಮತ್ತೊಂದೆಡೆ ಅಕ್ರಮದ ವಿರುದ್ಧ ಪ್ರಶ್ನೆ ಮಾಡಬೇಕಾದ ಅಧಿಕಾರಿಗಳೇ ಅಕ್ರಮಕ್ಕೆ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತಹಶೀಲ್ದಾರ್ ವಿರುದ್ಧ ಇಂತಹದ್ದೇ ಒಂದು ಆರೋಪ ಕೇಳಿ ಬಂದಿದೆ. ದುಡ್ಡು ಕೊಟ್ರೆ ಸೀಜ್ ಮಾಡಿರೋ ಮರಳು ಲಾರಿಗಳನ್ನು ಬಿಡುವ ಬಗ್ಗೆ ಹೇಳಿಕೊಂಡಿರುವುದಾಗಿ ತಹಶೀಲ್ದಾರ್ ವಿಜಯ್ ಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೇ ತಹಶೀಲ್ದಾರ್ ವಿಜಯ್ ಕುಮಾರ್ ಲಂಚ ಕೇಳ್ತಿರೋ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿದು ಹರಿಬಿಡಲಾಗಿದೆ.