ಮಂಡ್ಯ: ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂಬ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಬಿ.ಸಿ.ಪಾಟೀಲ್ ಅವರು ತಿರುಗೇಟು ನೀಡಿದ್ದಾರೆ.
ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಅವರು ಒಂದು ವರ್ಷ ಯಾಕೆ ಸುಮ್ಮನಿದ್ದರು. ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ?. ಮೈತ್ರಿ ಸರ್ಕಾರದ ನಿಶೆಯಿಂದ ಹೊರಬರಲು ಕುಮಾರಸ್ವಾಮಿಗೆ ಒಂದು ವರ್ಷ ಬೇಕಾಯಿತೇ?. ಮೈತ್ರಿ ಸರ್ಕಾರ ಅಸ್ಥಿರಗೊಂಡಾಗ ಏಕೆ ಕುಮಾರಸ್ವಾಮಿ ಈ ಬಗ್ಗೆ ಹೇಳಲಿಲ್ಲ. ಕುಮಾರಸ್ವಾಮಿ ಆಗಾಗ ಊಸರವಳ್ಳಿಯಂತೆ ಬಣ್ಣಬದಲಾಯಿಸುತ್ತಿರುತ್ತಾರೆ. ಮುಖ್ಯಮಂತ್ರಿಯಾಗಿದ್ದವರು ಅವರು, ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.