ಬಿಹಾರದ ತನಿಷ್ಕ್ ಶೋ ರೂಮ್‌ನಲ್ಲಿ ನಡೆದ 25 ಕೋಟಿ ರೂಪಾಯಿ ಮೌಲ್ಯದ ಆಭರಣ ದರೋಡೆ ಪ್ರಕರಣವು ಭಾರೀ ಸುದ್ದಿಯಾಗಿದೆ. ಈ ಸಂಬಂಧದ ಆಘಾತಕಾರಿ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಘಟನೆಯ ವಿವರ:
6 ಜನ ಶಸ್ತ್ರಸಜ್ಜಿತ ಅಪರಾಧಿಗಳು ಶೋ ರೂಂಗೆ ನುಗ್ಗಿ, 22 ನಿಮಿಷಗಳ ಕಾಲ ಅಂಗಡಿಯ ಎಲ್ಲ ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡರು.
ಈ ವೇಳೆ, ಅಭರಣಗಳನ್ನು ದೊಡ್ಡ ಪ್ಯಾಕೆಟ್‌ಗಳಲ್ಲಿ ತುಂಬಿಸಿಕೊಂಡು ಅವರು ದರೋಡೆ ಮಾಡಿದರು.
ಘಟನೆ ಬಳಿಕ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಘಟನೆ ಸ್ಥಳೀಯ ವ್ಯಾಪಾರಸ್ಥರು ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸಿದೆ. ಪೊಲೀಸರು ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡಾ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.