ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ವರುಣನ ರೌದ್ರಾವತಾರಕ್ಕೆ ಜನರು ತತ್ತರಿಸಿಹೋಗಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ಇದೀಗ ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಆತಂಕಕಾರಿ ಮಾಹಿತಿ ನೀಡಿದೆ. ಹೌದು ಕರಾವಳಿ ಜಿಲ್ಲೆಗಳಲ್ಲಿ 16ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇರೋದ್ರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್14,15ರಂದು ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗೋ ಸಾಧ್ಯತೆಯಿದೆ. ಆಗಸ್ಟ್ 13, 14,15, 16ರಂದುಕೆಲವೆಡೆ ಮಳೆಯಾಗಬಹುದು. ಇನ್ನೂ ಮಲೆನಾಡಿನ ಬಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!
ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...








