ಬೆಂಗಳೂರು: ಡ್ರಗ್ಸ್ ಜಾಲದ ಜತೆ ನಂಟು ಹೊಂದಿರುವ ಸ್ಯಾಂಡಲ್‍ವುಡ್ ನಟ-ನಟಿಯರ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ವಿಚಾರಣೆ ಎದುರಿಸಲಿದ್ದಾರೆ.
ಕಳೆದ ಸೋಮವಾರ ಒಂದು ಸುತ್ತಿನ ಸಿಸಿಬಿ ವಿಚಾರಣೆಗೆ ಒಳಗಾಗಿದ್ದ ಇಂದ್ರಜಿತ್ ಲಂಕೇಶ್, ಇಂದು ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು.
ಬೆಳಿಗ್ಗೆ 11 ಗಂಟೆಗೆ ಇಂದ್ರಜಿತ್ ವಿಚಾರಣೆಗೆ ಸಿಸಿಬಿ ಕಚೇರಿಗೆ ಆಗಮಿಸಲಿದ್ದು, ತಮ್ಮ ಬಳಿ ಇರುವ ಫೋಟೋ, ವಿಡಿಯೋ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡುವ ಸಾಧ್ಯತೆ ಇದೆ.
ಸೋಮವಾರ ನಡೆದ ವಿಚಾರಣೆ ವೇಳೆ ಇಂದ್ರಜಿತ್ ಲಂಕೇಶ್ ಹೇಳಿಕೆಯನ್ನಷ್ಟೇ ನೀಡಿದ್ದರು. ಹೀಗಾಗಿ ಇಂದು ದಾಖಲೆಗಳೊಂದಿಗೆ ಬರುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








