
ರಾಜ್ಯದಲ್ಲಿ ಅದ್ರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲೇ ವರುಣನ ಆರ್ಭಟದಿಂದ (The flood )ಪ್ರವಾಹದ ಸ್ಥಿತಿ ನಿರ್ಮಾವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ.
21ರಂದು ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ನಾಳೆಯೂ ಇದೇ ರೀತಿ ಜಿಟಿ ಜಿಟಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಹವಾ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುತ್ತಿದ್ದು, ಅದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಪೂರ್ವ ಭಾಗದ ಜಿಲ್ಲೆಗಳ ಮೇಲೆ ಉಂಟಾಗಿದೆ.ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಆದರೆ , ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಇದೇ ರೀತಿ ಜಿಟಿ ಜಿಟಿ ಮಳೆ ಮುಂದುವರೆಯಲಿದೆ.

ಇನ್ನೂ ಮಳೆ ಹೀಗೆ ಮುಂದುವರೆದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಅದರಲ್ಲೂ ದಕ್ಷಿಣ , ಒಳನಾಡು, ಕರಾವಳಿ ಭಾಗಗಳಲ್ಲಿ ಜನಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಉತ್ತರ ಕರ್ನಾಕಟ ಭಾಗದಲ್ಲಿ ಈಗಾಗಲೇ ಮಳೆಯಿಂದಾಗಿ ಜನರು ನಲುಗಿಹೋಗಿದ್ದಾರೆ. ಇದರ ಬೆನ್ನಲ್ಲೇಮಳೆ ಹೀಗೆ ಮುಂದುವರೆವ ಭೀತಿಯಲ್ಲಿ ಆತಂಕದಲ್ಲಿ ಜನರು ದಿನ ಕಳೆಯುವಂತಾಗಿದೆ. ಈಗಾಗಲೇ ರಣಮಳೆಗೆ ಹಲವು ಮನೆಗಳು ಜಮೀನುಗಳು ನಾಶವಾಗಿ ಹಲವರು ಬದುಕು ಮೂರಾಬಟ್ಟಯಾಗಿದೆ. ಆದರೂ ವರುಣ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ
The flood
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








