ಬೆಂಗಳೂರು, ಸೆ.21: ಕೂಡಲಸಂಗಮ ಪಂಚಮಸಾಲಿ (Kudalasangama Panchamasali Peeta) ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು (Jayamruthyunjaya swamiji) ಉಚ್ಛಾಟನೆ ಮಾಡಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು (ಸೆ.21) ಪೀಠದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯದರ್ಶಿ ನೀಲಕಂಠ ಅಸೂಟಿ, ದಾವಣಗೆರೆ ಹಾಗೂ ಇತರೆ ಕಡೆ ಆಸ್ತಿ ಮಾಡಿದ್ದಾರೆ. ಹಾಗೇ ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳೋದಿಲ್ಲ. ಪೀಠದಲ್ಲಿ ಇರೋದಿಲ್ಲ. ಒಂದು ಪಕ್ಷದ ಪರ ಹೊರಟ್ಟಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಹೀಗೆ ಅನೇಕ ಕಾರಣ ನೀಡಿ ಉಚ್ಛಾಟನೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ
ಟ್ರಸ್ಟ್‌ನ 30 ಜನರ ಒಮ್ಮತದ ನಿರ್ಣಯದ ಮೇರೆಗೆ ಉಚ್ಚಾಟನೆ ಮಾಡಲಾಗಿದೆ. ಅವರಿಗೆ ಕಾರು ಸೇರಿ ಎಲ್ಲವನ್ನೂ ಕೊಡಿಸಿದ್ದೇವೆ. ಆದರೆ ಸ್ವಾಮೀಜಿ ಬಸವತತ್ವಕ್ಕೆ ವಿರುದ್ಧ ಮಾಡಿದ್ದಾರೆ. ಬಸವತತ್ವ ನಾವು ಯಾವತ್ತೂ ಹಿಂದೂ ಎನ್ನುವುದಿಲ್ಲ. ಹಿಂದೂ ಧರ್ಮದ ವಿರುದ್ಧವೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ ಅಂತ ಅಸೂಟಿ ಹೇಳಿದರು.
2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಸ್ವಾಮೀಜಿ
ಕರ್ನಾಟಕದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಪ್ರವರ್ಗ 2ಎಗೆ ಸೇರ್ಪಡೆ ಮಾಡಿ ಎಂದು ಪಂಚಮಸಾಲಿಗಳು ಹೋರಾಟ ನಡೆಸುತ್ತಿದ್ದಾರೆ. ಕೂಡಲಸಂಗಮದ ಪಂಚಮಸಾಲಿ ಪೀಠದ ಅಧ್ಯಕ್ಷರಾಗಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








