ಕೊಡಗು : ಕಡಗು ಜಿಲ್ಲೆಯಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಹೊಸದಾಗಿ 72 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1086ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ 14ಕ್ಕೇರಿದೆ. ಇನ್ನೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈವರೆಗೂ ಗುಣಮುಖರಾದವರ ಸಂಖ್ಯೆ 725 ಇದ್ದರೆ, ಇನ್ನೂ 347 ಸಕ್ರಿಯ ಕೇಸ್ ಗಳಿವೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 267 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ದಿನೇ ದಿನೇ ಕೊರೊನಾ ರೌದ್ರಾವತಾರ ಹೆಚ್ಚುತ್ತಲೇ ಇರುವ ಪರಿಣಾಮ ಜನರಲ್ಲಿ ಆತಂಕ ಹೆಚ್ಚಾಗಿದೆ.