ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎನ್ನಲಾಗ್ತಿದೆ. ಜುಲೈ 20ರಂದು ಸಾಮಾಜಿಕ ಜಾಲತಾಣದ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಪ್ರೇಮಬರಹದ ನಾಯಕಿ ಕೋವಿಡ್ ಧೃಡಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದರು. ಇದೀಗ ಅವರು ಚೇತರಿಸಿಕೊಂಡಿದ್ದು, ಪುನಃ ಮಾಡಿರುವ ಪರೀಕ್ಷೆಯ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂಬ ಖುಷಿಯನ್ನು ಹಂಚಿಕೊಂಡಿದ್ದಾರೆ. ‘ನನ್ನ ಎಲ್ಲ ಹಿತೈಷಿಗಳಿಗೆ ಹೇಳಲು ಬಯಸುವುದೇನೆಂದರೆ ದೇವರ ದಯೆಯಿಂದ ನಾನು ಈಗ ಕೊರೊನಾ ವೈರಸ್ತಪಾಸಣೆಯಲ್ಲಿ ನೆಗೆಟಿವ್ ವರದಿ ಪಡೆದಿದ್ದೇನೆ. ನನ್ನ ಕುರಿತು ಯೋಚಿಸಿದ, ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ಈ ಪಿಡುಗು ಇನ್ನೂ ದೂರವಾಗಿಲ್ಲ. ಹೀಗಾಗಿ ಪ್ರತಿಯೊಬ್ಬರ ಬಗ್ಗೆ ಕಾಳಜಿ ವಹಿಸಿ. ಸುರಕ್ಷಿತರಾಗಿರಿ’ ಎಂದು ಐಶ್ವರ್ಯಾ ಹೇಳಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








