ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 21 ಕ್ಕೇರಿದಂತಾಗಿದೆ.
ಚಾಮರಾಜನಗರ ಪಟ್ಟಣದ ಕೆ.ಪಿ ಮೊಹಲ್ಲಾದ 55 ವರ್ಷದ ವೃದ್ಧ ಹಾಗೂ ಮುಬಾರಕ್ ಮೊಹಲ್ಲಾದ 60 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತರನ್ನು ಚಾಮರಾಜನಗರ ಗುಂಡ್ಲುಪೇಟೆ ರಸ್ತೆಯಲ್ಲಿರುವ ಖಬ್ರಸ್ಥಾನದಲ್ಲಿ ಕುಟುಂಬಸ್ಥರಿಗೆ ಅಂತಿಮ ದರ್ಶನ ಪಡೆದ ಬಳಿಕ, ಮುಸ್ಲೀಂ ಸಂಪ್ರದಾಯದಂತೆ ನಮಾಜ್ ಮಾಡಿದ ಬಳಿಕ ಅಂತ್ಯಕ್ರಿಯೆ ಮಾಡಲಾಯಿತು.








