ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ (58) ಮತ್ತು ಸಂಜಯ್ ಸವದತ್ತಿ (18) ಕೊನೆಯುಸಿರೆಳೆದಿದ್ದಾರೆ. ಡಿಸೆಂಬರ್ 23 ರಂದು ಮಧ್ಯರಾತ್ರಿ 1:30ಕ್ಕೆ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ವೇಳೆ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತವರಿಗೆ ಹುತಾತ್ಮ ಯೋಧರ ಪಾರ್ಥಿವ ಶರೀರ:ಅನೂಪ್ ಪೂಜಾರಿ ಮನೆಯಲ್ಲಿ ನೀರವ ಮೌನ
ಜಮ್ಮು ಕಾಶ್ಮೀರದ (Jammu Kashmir) ಪೂಂಚ್ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ (Karnataka) ಸೈನಿಕರ ಪಾರ್ಥಿವ ಶರೀರಗಳು ತವರಿಗೆ ತಲುಪಿವೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಯೋಧ...