ದೆಹಲಿ ಸರ್ಕಾರಿ ವಿಶ್ವವಿದ್ಯಾಲಯಗಳ ಪರೀಕ್ಷೆ ರದ್ದು. ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ …!
ಹೊಸದಿಲ್ಲಿ, ಅಗಸ್ಟ್ 11: ದೆಹಲಿ ಸರ್ಕಾರಿ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್ 30 ರ ಮೊದಲು ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಕಡ್ಡಾಯಗೊಳಿಸಿರುವ ಯುಜಿಸಿ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ .
ದೆಹಲಿ ಸರ್ಕಾರವು, ಎಲ್ಲಾ ದೆಹಲಿ ರಾಜ್ಯ ವಿಶ್ವವಿದ್ಯಾಲಯಗಳಿಗೆ ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ಎಲ್ಲಾ ಆನ್ಲೈನ್ ಮತ್ತು ಆಫ್ಲೈನ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶಿಸಿದೆ.
ಜುಲೈ 11, 2020 ರ ನಂತರ ದೆಹಲಿ ಸರ್ಕಾರವು ಪರೀಕ್ಷೆಗಳನ್ನು ನಡೆಸದಿರುವ ನಿರ್ಧಾರವನ್ನು ಕೈಗೊಂಡಿದ್ದು, ಎಲ್ಲಾ ದೆಹಲಿ ರಾಜ್ಯ ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ಎಲ್ಲಾ ಲಿಖಿತ ಆನ್ಲೈನ್ ಮತ್ತು ಆಫ್ಲೈನ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

ಪ್ರಸ್ತುತ ಸ್ಥಿತಿಯ ಪ್ರಕಾರ, ಜಿಜಿಎಸ್ಪಿ ವಿಶ್ವವಿದ್ಯಾಲಯದಲ್ಲಿ ಸುಮಾರು 27,000 ಅಂತಿಮ ವರ್ಷದ ವಿದ್ಯಾರ್ಥಿಗಳಿದ್ದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡುವ ಮೌಲ್ಯಮಾಪನಕ್ಕಾಗಿ ಯಾಂತ್ರಿಕ ವ್ಯವಸ್ಥೆಯನ್ನು ರೂಪಿಸುತ್ತಿದೆ.
ಇತರ ಆರು ವಿಶ್ವವಿದ್ಯಾಲಯಗಳು ಆನ್ಲೈನ್ ಮೋಡ್ ಮೂಲಕ ಅಂತಿಮ ವರ್ಷದ ಪರೀಕ್ಷೆಯನ್ನು ಪೂರ್ಣಗೊಳಿಸಿವೆ.








