ಪದ್ಮಶ್ರೀ ಪ್ರಶಸ್ತಿಗೆ ಪುನೀತ್ ರಾಜ್ ಕುಮಾರ್ ಹೆಸರು ಶಿಫಾರಸ್ಸು……
ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರದಾನಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಲ್ಲದೆ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಶೀಘ್ರದಲ್ಲಿಯೇ ನಿಗದಿಗೊಳಿಸಲಾಗುವುದು ಎಂದು ತಿಳಿಸದರು.
ಸೋಮವಾರ ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಮಾತನಾಡಿದ ಬೊಮ್ಮಾಯಿ ಅವರು ಸರ್ಕಾರ ಈಗಾಗಲೇ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಘೋಷಣೆ ಮಾಡಿದೆ. ಶೀಘ್ರದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಪಡಿಸಲಾಗುವುದು ಎಂದು ಕಲಾಪದಲ್ಲಿ ತಿಳಿಸಿದರು.
ಇದಲ್ಲದೇ, ಪುನೀತ್ ರಾಜ್‌ಕುಮಾರ್ ಆವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರದಾನ ಮಾಡುವಂತೆ ಕೇಂದ್ರಕ್ಕೆ ಶಿಫಾರಸನ್ನು ಸಹ ಮಾಡಲಾಗುವುದು ಎಂದು ಹೇಳಿದರು. ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರ ಕರ್ನಾಟಕ ರತ್ನಕ್ಕೆ ಭಾಜನರಾದ 10ನೇ ವ್ಯಕ್ತಿಯಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನ ಮರಣೋತ್ತರವಾಗಿ ಸೂಚಿಸಲಾಗಿದೆ.
. ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಇಲ್ಲಿಯವರೆಗೆ ಒಂಬತ್ತು ಗಣ್ಯರಿಗೆ ನೀಡಲಾಗಿದೆ, 2009 ರಲ್ಲಿ ಈ ಪ್ರಶಸ್ತಿಯನ್ನು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಕೊನೆಯ ಭಾರಿ ನೀಡಲಾಗಿತ್ತು. ಇದಾಗಿ 11 ವರ್ಷಗಳ ಬಳಿಕ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.