ಸರಿಯಾಗಿ ಮಾತನಾಡೋದು ಕಲಿ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಏಕವಚನ ಪ್ರಯೋಗ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಏಕವಚನದಲ್ಲಿ ಕಿಡಿಕಾರಿದ್ದಾರೆ.
ನಗರದಲ್ಲಿ ಜೆಪಿಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ನನಗೆ ಏಕವಚನ ಬಳಸಿ ಮಾತಾನಾಡ್ತಾರೆ.
ಈ ಕುಮಾರಸ್ವಾಮಿಗೆ ನಾಚಿಕೆ ಆಗಲ್ವಾ ಅಂತಾರೆ. ನನಗೆ ಏಕೆ ನಾಚಿಕೆ ಆಗಬೇಕು, ನಿಮ್ಮ ತರ ಡಬಲ್ ಸ್ಟ್ಯಾಂಡರ್ಡ್ ರಾಜಕೀಯ ಮಾಡೋದಿಲ್ಲ.
ದೇವೇಗೌಡ ನೇಗಿಲು ಹಿಡಿದಿದ್ನಾ, ಸಗಣಿ ಎತ್ತಿದ್ನಾ ಅಂತ ಮಾತಾಡ್ತೀಯಾ? ನಿನಗೇನಪ್ಪ ಗೊತ್ತು ದೇವೇಗೌಡರ ಬಗ್ಗೆ. ದೇವೇಗೌಡರು ಕೃಷಿ ಮಾಡಿದ್ದಾರೆ, ನಾವು ಸಗಣಿ ಬಾಚಿರೋರೆ, ಮಾತಾಡುವಾಗ ಸರಿಯಾಗಿ aಕಲಿತುಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಹರಿಯ್ದರು.
ಬಿಜೆಪಿ ಜೊತೆ ಜೆಡಿಎಸ್ ವಿಲೀನ : ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು : ಮೈತ್ರಿ ಸರ್ಕಾರ ಪತನದ ಬಳಿಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಡಳಿತರೂಢ ಪಕ್ಷ ಬಿಜೆಪಿ ಪರ ಬ್ಯಾಟ್ ಬೀಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಗುಪ್ತ್ ಗುಪ್ತ್ ಮಾತುಕತೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನವರು ಬಿಜೆಪಿ ಜೊತೆ ಜೆಡಿಎಸ್ ಒಪ್ಪಂದ ಮಾಡಿಕೊಂಡಿದೆ ಅಂತಾ ಆರೋಪ ಮಾಡುತ್ತಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಏತನ್ಮಧ್ಯೆ ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಲಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಇದೀಗ ಸ್ವತಃ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನಡೆಸಿದ್ದಾರೆ.. ಆದರೆ ನಮ್ಮ ಪಕ್ಷವನ್ನ ಇನ್ನೊಂದು ಪಕ್ಷದ ಜೊತೆ ವಿಲೀನ ಮಾಡುವುದಿಲ್ಲ. ಬೇರೆ ಪಕ್ಷದ ಜೊತೆ ವಿಲೀನದ ಅವಶ್ಯಕತೆ ಇಲ್ಲ. ರಾಜಕಾರಣದಲ್ಲಿ ಬದಲಾವಣೆ ಆಗುತ್ತಲೇ ಇರುತ್ತದೆ. ಬಿಜೆಪಿಗೆ ಸಂಖ್ಯಾಬಲ ಅಗತ್ಯದಷ್ಟಿದೆ. ಸದ್ಯಕ್ಕಂತೂ ಬಿಜೆಪಿಗೆ ನಮ್ಮ ಅವಶ್ಯಕತೆ ಇಲ್ಲ ಎಂದು ವದಂತಿಗಳಿಗೆ ಸ್ಪಷ್ಟನೆ ನೀಡಿದರು.
ಆರ್ ವರ್ತೂರ್ ಪ್ರಕಾಶ್ ಅಪಹರಣ ಕೇಸ್ : ಕಿಂಗ್ ಪಿನ್ ಅರೆಸ್ಟ್
ಗೋಹತ್ಯೆ ನಿಷೇಧ ರೈತರಿಗೆ ಕುತ್ತು : ಸತೀಶ್ ಜಾರಕಿಹೊಳಿ
ಚಿಕ್ಕೋಡಿ : ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ತೊಂದರೆ ಉಂಟಾಗುತ್ತದೆ. ಗೋಹತ್ಯೆ ನಿಷೇಧ ನೇರವಾಗಿ ರೈತರಿಗೆ ಕುತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ತೊಂದರೆ ಉಂಟಾಗುತ್ತದೆ. ಪ್ರತಿ ಸಲ ದನಗಳನ್ನು ಮಾರಾಟ ಮಾಡಬೇಕಾದರೆ ಸರ್ಕಾರದ ಪರ್ ಮಿಟ್ ತೆಗೆದುಕೊಳ್ಳಬೇಕಾಗುತ್ತೆ. ದನಗಳು ಬೇಡವಾದರೆ ಅವುಗಳನ್ನು ಗೋಶಾಲೆಗೆ ಕಳಿಸಬೇಕು. ಆದ್ರೆ ಸರ್ಕಾರದ ಗೋಶಾಲೆಗಳಿಲ್ಲ. ಖಾಸಗಿ ಗೋಶಾಲೆಗೆ ಕಳಿಸಬೇಕಾದರೆ ದಿನಂಪ್ರತಿ ಖರ್ಚುನ್ನು ರೈತರೇ ಕೊಡಬೇಕು ಎಂದು ವಿವರಿಸಿದರು.
ಗೋ ಹತ್ಯೆ ನಿಷೇಧಕ್ಕೆ ನಮ್ಮ ವಿರೋಧವಿಲ್ಲ : ಸಿದ್ದರಾಮಯ್ಯ
ಬಾಗಲಕೋಟೆ : ರಾಜ್ಯ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರಕಿದ್ದು, ಗೋ ಹತ್ಯೆ ನಿಷೇಧಕ್ಕೆ ನಮ್ಮ ವಿರೋಧವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧಕ್ಕೆ ನಮ್ಮ ವಿರೋಧವಿಲ್ಲ. ಆದ್ರೆ ಅದಕ್ಕೂ ಮುನ್ನ ತಜ್ಞರ ಜೊತೆ ಚರ್ಚಿಸಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಸಾಧಕ ಬಾಧಕಗಳ ಅರಿವಿಲ್ಲದೇ ಭಾವನಾತ್ಮಕವಾಗಿ ಕಾಯ್ದೆ ಮಾಡಿದ್ರೆ ಫ್ಯಾಶಿಸಂ ಆಗುತ್ತೆ. ವಯಸ್ಸಾದ ಜಾನುವಾರು ರೈತರು ಇಟ್ಟುಕೊಂಡು ಏನು ಮಾಡಬೇಕು.
ಕಾನೂನಿನ ಅನ್ವಯ ಅವುಗಳನ್ನು ಗೋಶಾಲೆಯಲ್ಲಿ ಇರಿಸಬೇಕು. ಅದಕ್ಕೆ ರೈತರು ಹಣ ಕೊಡಬೇಕು ಅನ್ನುತ್ತಾರೆ. ರೈತರು ಯಾಕೆ ದುಡ್ಡು ಕೊಡಬೇಕು. ಬದಲಿಗೆ ಸರ್ಕಾರವೇ ಖರೀದಿಸಲಿ ಎಂದು ಅಭಿಪ್ರಾಯಪಟ್ಟರು.
ಇನ್ನು ಗೋಹತ್ಯೆ ನಿಷೇಧ ಯಡಿಯೂರಪ್ಪ ಅವರ ಕಾರ್ಯಕ್ರಮವಲ್ಲ. ಬದಲಿಗೆ ಅರ್ ಎಸ್ ಎಸ್ ನವರದ್ದು. ಅವರೇ ಸಿಎಂ ಮೇಲೆ ಒತ್ತಡ ಹಾಕಿ ಕಾಯ್ದೆ ಜಾರಿಗೊಳಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಅಂದ್ರೆ ಸುಳ್ಳಿಗೆ ಇನ್ನೊಂದು ಹೆಸರು : ಈಶ್ವರಪ್ಪ
ದಾವಣಗೆರೆ : ಸಿದ್ದರಾಮಯ್ಯ ಅಂದ್ರೆ ಸುಳ್ಳಿಗೆ ಇನ್ನೊಂದು ಹೆಸರು. ಸಿದ್ದರಾಮಯ್ಯನಂತಹ ಸುಳ್ಳುಗಾರನನ್ನು ನನ್ನ ಜೀವನದಲ್ಲಿ ನೋಡಿಲ್ಲ ಎಂದು ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ವೇಳೆ ಸಿದ್ದರಾಮಯ್ಯ ದೆಹಲಿಯಿಂದ ಮಾಹಿತಿ ಬಂದಿದೆ. ಚುನಾವಣೆ ಬಳಿಕ ಸಿಎಂ ಬದಲಾಗುತ್ತಾರೆ ಅಂತಾ ಹೇಳಿದ್ದರು. ಆದ್ರೆ ಚುನಾವಣೆ ಮುಗಿದು ಎಷ್ಟು ದಿನಗಳು ಕಳೆದವು. ಎಲ್ಲಿ ನಾಯಕತ್ವ ಬದಲಾವಣೆ ಆಯ್ತು ಎಂದು ಈಶ್ವರಪ್ಪ ಪ್ರಶ್ನಿಸಿದರು.
ಇನ್ನು ಸಿದ್ದರಾಮಯ್ಯ ಅಂದ್ರೆ ಸುಳ್ಳಿಗೆ ಇನ್ನೊಂದು ಹೆಸರು. ಸಿದ್ದರಾಮಯ್ಯನಂತಹ ಸುಳ್ಳುಗಾರನನ್ನು ನನ್ನ ಜೀವನದಲ್ಲಿ ನೋಡಿಲ್ಲ.ಮುಂದಿನ ಮುಖ್ಯಮಂತ್ರಿ ಆಗ್ತೀನಿ ಎಂದು ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ಹಗಲುಗನಸಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








