ಬಿಜೆಪಿ ಪರ ಜಿಟಿಡಿ ಬ್ಯಾಟಿಂಗ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರ – ಜಿ ಟಿ ದೇವೇಗೌಡ!
ಮೈಸೂರು : ಜೆಡಿಎಸ್ ನಾಯಕ ಜಿಟಿ ದೇವೇಗೌಡರು ಸದಾ ಬಿಜೆಪಿ ಪರವಾಗಿ ಮಾತನಾಡುತ್ತಲೇ ಸುದ್ದಿಯಲ್ಲಿರೋದು ಹೆಚ್ಚು. ಇದೀಗ ಮತ್ತೆ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಬಿಜೆಪಿ ಸರ್ಕಾರ ಅಲ್ಲಾಡುತ್ತಿದೆ, ಸರ್ಕಾರ ಬೀಳುತ್ತದೆ ಎಂದು ಹೇಳುವವರು ರಾಜಕೀಯ ಪ್ರಭುದ್ಧತೆ ಇಲ್ಲದವರು ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದಾರೆ.
ಮೋದಿ ಅಧಿಕಾರವಧಿಯಲ್ಲೇ ದೇಶದಲ್ಲಿ ಗೋವು ರಫ್ತು ಹೆಚ್ಚಳ : ಸಿದ್ದರಾಮಯ್ಯ
ಇದೇ ವೇಳೆ ಮೈತ್ರಿ ಸರ್ಕಾರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಕೆಟ್ಟಿದೆ ಎಂಬ ವಿಚಾರವಾಗಿ ಮಾತನಾಡಿದ ಜಿ ಟಿ ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿ ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತ್ತು ಎಂದು ನನಗೆ ಅನ್ನಿಸುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸವನ್ನೇ ಮಾಡಿದ್ದಾರೆ. ಅವರ ಹೆಸರು ಹೇಗೆ ಕೆಡುತ್ತದೆ. ಕುಮಾರಸ್ವಾಮಿ ಅವರಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಅವರು ಏನನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಹಾಗೇ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








