ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು ಜನರನ್ನು ಹೈರಾಣಾಗಿಸಿದೆ.
ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗಿದೆ. ಈ ತೀವ್ರ ಬಿಸಿಲಿನ ನಡುವೆ ಸರ್ಕಾರಿ ನೌಕರರಿಗೆ ಕಾರ್ಯನಿರ್ವಹಿಸುವುದು ಕಷ್ಟಕರವಾಗುತ್ತಿದೆ. ದೀರ್ಘ ಕಾಲ ಬಿಸಿಲಿನಲ್ಲಿ ಕೆಲಸ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು, ದೌರ್ಬಲ್ಯ ಹಾಗೂ ಸುಸ್ತು ಹೆಚ್ಚುತ್ತಿರುವುದಾಗಿ ನೌಕರರು ತಿಳಿಸಿದ್ದಾರೆ.
ಈ ಹಿನ್ನೆಲೆ, ತಕ್ಷಣವೇ ಕೆಲಸದ ಅವಧಿಯನ್ನು ಬದಲಾಯಿಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಬೆಳಿಗ್ಗೆ ಬೇಗ ಕೆಲಸ ಪ್ರಾರಂಭಿಸಿ ಮಧ್ಯಾಹ್ನದ ಉರಿಯುವ ಬಿಸಿಲಿನಿಂದ ತಪ್ಪಿಸಿಕೊಳ್ಳುವಂತೆ ಸಮಯ ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದಾರೆ.
ಸರ್ಕಾರ ಈ ಬೇಡಿಕೆಗೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಇದೀಗ ಗಮನ ಸೆಳೆಯುತ್ತಿದೆ.








