ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನ ಈಡೇರಿಸದೇ ಇದ್ದರೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭೋಪಾಲ್ ನಲ್ಲಿ ಮಾತನಾಡಿದ ಸಿಂಧಿಯಾ ಕಾಂಗ್ರೆಸ್ ಭರವಸೆ ನೀಡಿದ ಮೇಲೆ ಅದನ್ನು ಈಡೇರಿಸದೆ ಇರುವುದಿಲ್ಲ. ಹಾಗಾಗಿ ಮುಖ್ಯಮಂತ್ರಿ ಕಮಲ್ ನಾಥ್ ಪ್ರಣಾಳಿಕೆಯಲ್ಲಿ ವಾಗ್ದಾನ ನೀಡಿದಂತೆ ರೈತರ ಸಾಲ, ಶಿಕ್ಷಕರ ಬೇಡಿಕೆ ಈಡೇರಿಸಬೇಕಾಗಿದೆ. ಇಲ್ಲದಿದ್ದರೆ ರೈತರ ಜೊತೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಕೆಲ ದಿನಗಳ ಮೊದಲು ಪಕ್ಷದ ನಾಯಕ ಗೋವಿಂದ್ ಸಿಂಗ್ ಸಾಲ ಮನ್ನಾ ಮಾಡಲು ಅಸಾಧ್ಯ ಎಂದಿದ್ದರು.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








