ಮನೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ
ಬೆಂಗಳೂರು : ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಯಲ್ಲೇ ಕೊರೊನಾ ವ್ಯಾಕ್ಸಿನ್ ಪಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಿ.ಸಿ ಪಾಟೀಲರ ಈ ನಡೆಗೆ ಸರ್ಕಾರದ ಕೆಲ ಸಚಿವರೇ ಬೇಸರ ಹೊರಹಾಕುತ್ತಿದ್ದಾರೆ.
ಈ ಮಧ್ಯೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಕೋವಿಡ್ ಮಾರ್ಗಸೂಚಿ ಪ್ರಕಾರ ಮನೆಯಲ್ಲಿ ಕೊರೊನಾ ವ್ಯಾಕ್ಸಿನ್ ಪಡೆಯಲು ಯಾರಿಗೂ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಪಾಟೀಲರ ಜೊತೆ ನಾನು ಈ ಬಗ್ಗೆ ಮಾತನಾಡುತ್ತೇನೆ. ಹಾಗೇ ಕೊರೊನಾ ವಾಕ್ಸಿನ್ ಪಡೆಯುವುದರ ಕುರಿತಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಬಿ.ಸಿ.ಪಾಟೀಲರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ. ಮನೆಯಲ್ಲಿ ಲಸಿಕೆ ಪಡೆದ್ರೆ ತಪ್ಪಿಲ್ಲ ಅನ್ನೋ ತಪ್ಪುಗ್ರಹಿಕೆಯಿಂದಾಗಿ ಈ ಘಟನೆ ನಡೆದಿದೆ. ಈಗ ಸ್ವಲ್ಪ ತಪ್ಪಾಗಿದ್ದು, ಮತ್ತೆ ಈ ರೀತಿ ಆಗದಂತೆ ಎಚ್ಚರವಹಿಸುತ್ತೇವೆ ಎಂದು ಸುಧಾಕರ್ ಅವರು ತಿಳಿಸಿದರು.









