ಬೆಂಗಳೂರು : ಇಂದು ಮತ್ತು ನಾಳೆ ತಲಾ 800 ಬಸ್ಸುಗಳನ್ನು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿಯಾಗಿ ಕಾರ್ಯಚರಣೆ ಮಾಡಲು ಯೋಜಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಈಗಾಗಲೇ ಇಂದು ಬೆಳಿಗ್ಗೆ 10 ಗಂಟೆಯವರೆಗೆ 249 ಬಸ್ಸುಗಳನ್ನುಬೆಂಗಳೂರಿನಿಂದ ಕಾರ್ಯಚರಣೆಗೊಳಿಸಿದ್ದು, 6641 ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿರುತ್ತಾರೆ. ಇಂದು 231 ಬಸ್ಸುಗಳು ಮುಂಗಡ ಬುಕ್ಕಿಂಗ್ ಆಗಿವೆ.
ಸಾಮಾಜಿಕ ಅಂತರ ಕಾಪಾಡಿ, ಪ್ರತಿಯೊಬ್ಬ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಸಾರ್ವಜನಿಕರಲ್ಲಿ ವಿನಂತಿ ವೃಥಾ ಆತಂಕಕ್ಕೆ ಒಳಗಾಗಬೇಡಿ ಅತೀ ಹೆಚ್ಚು ಬಸ್ಸುಗಳನ್ನು ಕಾರ್ಯಾಚರಣೆಗೆ ನಿಯೋಜಿಸಲು ಈಗಾಗಲೇ ಯೋಜಿಸಲಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.








