“ಸೀತಮ್ಮನ ಮಗ” ನಿಗೆ ಬಿರುಸಿನ ಚಿತ್ರೀಕರಣ…!
ಸೋನು ಫಿಲಂಸ್ ಲಾಂಛನದಲ್ಲಿ ಕೆ.ಮಂಜುನಾಥ್ ನಾಯಕ್ ನಿರ್ಮಿಸುತ್ತಿರುವ, ಯತಿರಾಜ್ ನಿರ್ದೇಶಿಸುತ್ತಿರುವ “ಸೀತಮ್ಮನ ಮಗ” ಚಿತ್ರಕ್ಕೆ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಕಳೆದ ಹದಿನೈದು ದಿನಗಳಿಂದ ಅಲ್ಲಿನ ಮನೆ, ಶಾಲೆ ಹಾಗೂ ಸುಂದರ ಪರಿಸರದಲ್ಲಿ ಅನೇಕ ಕಲಾವಿದರ ಪಾಲ್ಗೊಳ್ಳುವಿಕೆಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.
ಯತಿರಾಜ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ ಮತ್ತು ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಚೈತ್ರಾ ಶ್ರೀನಿವಾಸ್, ಚರಣ್ ಕಾಸಲ, ಸೋನು ಸಾಗರ, ಬುಲೆಟ್ ರಾಜು, ಬಸವರಾಜ್, ಜೀವನ್ ರಾಜ್, ಮಂಜುನಾಥ್ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿನು ಮನಸು ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಜೀವನ್ ರಾಜ್ ಛಾಯಾಗ್ರಹಣ ಹಾಗೂ ಶಶಿಕುಮಾರ್ ಅವರ ಸಹ ನಿರ್ದೇಶನವಿದೆ.








