ಬೆಂಗಳೂರು : ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಊರಿಗೆ ಕಳಿಸಿಕೊಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ಹೇಳಿದಂತೆ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು ಎಂಬ ಸುಪ್ರೀಮ್ ಕೋರ್ಟ್ ಆದೇಶವನ್ನು ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ತಕ್ಷಣ ಜಾರಿಗೆ ತರಲು ಮುಂದಾಗಬೇಕು .
ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಮುಖ್ಯಮಂತ್ರಿಗಳೂ ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯಪ್ರವೃತ್ತರಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.








